76ನೇ ಗಣರಾಜ್ಯೋತ್ಸವ : ವಿವಿಧ ಕ್ಷೇತ್ರದ 10,000 ಸಾಧಕರಿಗೆ ಆಹ್ವಾನ
- ಸಂಪಾದಕೀಯ
- Jan 10
- 1 min read
76ನೇ ಗಣರಾಜ್ಯೋತ್ಸವ : ವಿವಿಧ ಕ್ಷೇತ್ರದ 10,000 ಸಾಧಕರಿಗೆ ಆಹ್ವಾನ

ಹೊಸದಿಲ್ಲಿಯ ಕರ್ತವ್ಯ ಪಥದಲ್ಲಿ ಜ.26ರಂದು ನಡೆಯಲಿರುವ 76ನೇ ಗಣರಾಜ್ಯೋತ್ಸವ ಮೆರವಣಿಗೆಗೆ 10,000 ಅತಿಥಿಗಳನ್ನು ಆಹ್ವಾನಿಸಲಾಗುತ್ತದೆ. ಗ್ರಾ.ಪಂ. ಅಧ್ಯಕ್ಷರಾಗಿ ಸಾಧನೆ ಮಾಡಿದವರು, ಪ್ಯಾರಾಲಿಂಪಿಕ್ಸ್ ಕೂಟದಲ್ಲಿ ಸಾಧನೆ ಮಾಡಿದವರು, ಕೈಮಗ್ಗ ಕುಶಲಕರ್ಮಿಗಳು, ಅರಣ್ಯ ಮತ್ತು ವನ್ಯಜೀವಿ ಸಂರಕ್ಷಣ ಕಾರ್ಯಕರ್ತರು ಸೇರಿದಂತೆ ಒಟ್ಟು 31 ವಿಭಾಗಗಳ ಸಾಧಕರು ಸೇರಿದ್ದಾರೆ. ಸರಕಾರಿ ಕಾರ್ಯಕ್ರಮಗಳಲ್ಲಿ ಜನರ ಭಾಗವಹಿಸುವಿಕೆ ಹೆಚ್ಚಿಸುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಕೇಂದ್ರ ಸರಕಾರ ತಿಳಿಸಿದೆ.
Commentaires