ಮುಂಡಗಾರು ಲತಾ ಸೇರಿ 6 ಮಂದಿ ನಕ್ಸಲರು ನಾಳೆ(ಜ.08) ಶರಣಾಗತಿ...?
- ಸಂಪಾದಕೀಯ
- Jan 7
- 1 min read
ಮುಂಡಗಾರು ಲತಾ ಸೇರಿ 6 ಮಂದಿ ನಕ್ಸಲರು ನಾಳೆ(ಜ.08) ಶರಣಾಗತಿ...?

ರಾಜ್ಯ ಸರಕಾರದ ನಕ್ಸಲ್ ಶರಣಾಗತಿ ಪ್ಯಾಕೇಜ್ ಘೋಷಣೆ ಬಳಿಕ ಸಕ್ರಿಯ ನಕ್ಸಲರನ್ನು ಸಮಾಜದ ಮುಖ್ಯವಾಹಿನಿಗೆ ಕರೆತರುವ ಪ್ರಕ್ರಿಯೆ ನಡೆಯುತ್ತಿದ್ದು, ನಕ್ಸಲ್ ನಾಯಕಿ ಮುಂಡಗಾರು ಲತಾ ಸೇರಿದಂತೆ 6 ಮಂದಿ ನಕ್ಸಲರು ಜ. 08ರಂದು ಜಿಲ್ಲಾಡಳಿತ ಮತ್ತು ಜಿಲ್ಲಾ ಪೊಲೀಸ್ ಇಲಾಖೆ ಮುಂದೆ ಶರಣಾಗಲಿದ್ದಾರೆಂದು ಖಚಿತ ಮೂಲಗಳಿಂದ ತಿಳಿದು ಬಂದಿದೆ.
ಮುಂಡಗಾರು ಲತಾ, ವನಜಾಕ್ಷಿ ಬಾಳೆಹೊಳೆ, ಸುಂದರಿ ಕುತ್ಲೂರು, ಮಾರೆಪ್ಪ ಅರೋಲಿ, ಕೆ. ವಸಂತ, ಟಿ.ಎನ್. ಜೀಶ್ 2024ರ ನಕ್ಸಲ್ ಶರಣಾಗತಿ ಪ್ಯಾಕೇಜ್‌ನಡಿ ಸಮಾಜದ ಮುಖ್ಯವಾಹಿಗೆ ಬರುವುದು ಬಹುತೇಕ ಖಚಿತವಾಗಿದೆ. ಉಡುಪಿ ಜಿಲ್ಲೆ ಕಾರ್ಕಳ ಸಮೀಪದಲ್ಲಿ ನಕ್ಸಲ್ ಮುಖಂಡ ವಿಕ್ರಮ್ ಗೌಡ ಎನ್‌ಕೌಂಟರ್ ಬಳಿಕ ಭೂಗತರಾಗಿರುವ ನಕ್ಸಲರನ್ನು ಮುಖ್ಯವಾಹಿನಿಗೆ ಕರೆತರುವ ಪ್ರಯತ್ನವನ್ನು ನಕ್ಸಲ್ ಶರಣಾಗತಿ ಸಮಿತಿ, ಶಾಂತಿಗಾಗಿ ನಾಗರಿಕ ವೇದಿಕೆ ಸದಸ್ಯರು ನಡೆಸಿದ್ದರು.
ಸರಕಾರ ಕೂಡ ಸಕ್ರಿಯ ನಕ್ಸಲರನ್ನು ಸಮಾಜದ ಮುಖ್ಯವಾಹಿನಿಗೆ ಕರೆತರುವ ಉದ್ದೇಶದಿಂದ ನಕ್ಸಲ್ ಶರಣಾಗತಿ ಪ್ಯಾಕೇಜ್-2024 ಘೋಷಣೆ ಮಾಡಿತ್ತು. ಇವರ ಶರಣಾಗತಿಯೊಂದಿಗೆ ಜಿಲ್ಲೆಯ ಮಲೆನಾಡು ನಕ್ಸಲ್ ಪೀಡಿತ ಪ್ರದೇಶವೆಂಬ ಹಣೆಪಟ್ಟಿಯಿಂದ ಹೊರಬರಲಿದೆ.
"6 ಮಂದಿ ನಕ್ಸಲರ ಶರಣಾಗತಿ ಸಂಬಂಧ ಸರಕಾರದಿಂದ ಯಾವುದೇ ಆದೇಶ ಬಂದಿಲ್ಲ. ಅವರನ್ನು ಮುಖ್ಯವಾಹಿನಿಗೆ ಕರೆತರುವ ಪ್ರಯತ್ನ ನಡೆಯುತ್ತಿರುವುದು ನಿಜ." – ಡಾ| ವಿಕ್ರಮ್ ಅಮಟೆ, ಎಸ್‌ಪಿ, ಚಿಕ್ಕಮಗಳೂರು
Comments