BPL ಕಾರ್ಡ್ ಫಲಾನುಭವಿಗಳಿಗೆ ಇನ್ಮುಂದೆ ಹಣದ ಬದಲು ಅಕ್ಕಿ ವಿತರಣೆ : ಆಹಾರ ಸಚಿವ ಮುನಿಯಪ್ಪ
- ಸಂಪಾದಕೀಯ
- Feb 19
- 1 min read
Updated: Feb 20
BPL ಕಾರ್ಡ್ ಫಲಾನುಭವಿಗಳಿಗೆ ಇನ್ಮುಂದೆ ಹಣದ ಬದಲು ಅಕ್ಕಿ ವಿತರಣೆ : ಆಹಾರ ಸಚಿವ ಮುನಿಯಪ್ಪ

ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಯಾದ ಅನ್ನಭಾಗ್ಯದಡಿ ಫಲಾನುಭವಿಗಳಿಗೆ ನೀಡುತ್ತಿದ್ದ ಹಣದ ಬದಲಿಗೆ ಅಕ್ಕಿಯನ್ನೇ ಕೊಡಲು ಸರ್ಕಾರ ತೀರ್ಮಾನ ಮಾಡಿದೆ.
ಅನ್ನಭಾಗ್ಯ ಯೋಜನೆ ಅಡಿ ಬಿಪಿಎಲ್ ಕಾರ್ಡ್ ಫಲಾನುಭವಿಗಳಿಗೆ 10 ಕೆಜಿ ಅಕ್ಕಿ ಕೊಡುವುದಾಗಿ ಕಾಂಗ್ರೆಸ್ ಚುನಾವಣಾ ಸಂದರ್ಭದಲ್ಲಿ ಘೋಷಣೆ ಮಾಡಿತ್ತು. ನಂತರದ ದಿನಗಳಲ್ಲಿ ಅಗತ್ಯ ಪ್ರಮಾಣದಲ್ಲಿ ಅಕ್ಕಿ ಲಭ್ಯವಾಗದ ಕಾರಣ ಫಲಾನುಭವಿಗಳಿಗೆ 5 ಕೆಜಿ ಅಕ್ಕಿ ಕೊಟ್ಟು, ಉಳಿದ 5 ಕೆಜಿ ಅಕ್ಕಿ ಬದಲಿಗೆ 170 ರೂ. ನೀಡಲಾಗುತ್ತಿತ್ತು.
ಈ ಬಗ್ಗೆ ವಿಧಾನಸೌಧದಲ್ಲಿ ಮಾತನಾಡಿದ ಸಚಿವ ಕೆ.ಎಚ್ ಮುನಿಯಪ್ಪ "ಕೇಂದ್ರ ಸರ್ಕಾರದಿಂದ ಅಕ್ಕಿ ಲಭ್ಯವಿರುವ ಹಿನ್ನೆಲೆ ಹೆಚ್ಚುವರಿಯಾಗಿ 5 ಕೆಜಿ ಅಕ್ಕಿಯನ್ನು ಒಎಂಎಸ್‌ಎಸ್ ಯೋಜನೆ ಅಡಿಯಲ್ಲಿ ಖರೀದಿಸಿ ಈ ತಿಂಗಳಿನಿಂದಲೇ ಅಕ್ಕಿ ವಿತರಿಸಲು ತೀರ್ಮಾನಿಸಲಾಗಿದೆ" ಎಂದು ಹೇಳಿದ್ದಾರೆ.

Comments