ದೆಹಲಿ ವಿಧಾನಸಭಾ ಚುನಾವಣೆ : ಚುನಾವಣಾ ಫಲಿತಾಂಶದ ಬಳಿಕ ಮೊದಲಬಾರಿ ಪ್ರತಿಕ್ರಿಯೆ ನೀಡಿದ ಅರವಿಂದ ಕೇಜ್ರಿವಾಲ್
- ಸಂಪಾದಕೀಯ
- Feb 8
- 1 min read
ದೆಹಲಿ ವಿಧಾನಸಭಾ ಚುನಾವಣೆ : ಚುನಾವಣಾ ಫಲಿತಾಂಶದ ಬಳಿಕ ಮೊದಲಬಾರಿ ಪ್ರತಿಕ್ರಿಯೆ ನೀಡಿದ ಅರವಿಂದ ಕೇಜ್ರಿವಾಲ್

ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷಕ್ಕಾಗಿರುವ ಸೋಲನ್ನು ಒಪ್ಪಿಕೊಂಡಿರುವುದಾಗಿ ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. ಚುನಾವಣಾ ಫಲಿತಾಂಶದ ಬಳಿಕ ಮೊದಲಬಾರಿ ಪ್ರತಿಕ್ರಿಯೆ ನೀಡಿದ ಅವರು "ಇಂದು ದೆಹಲಿ ಚುನಾವಣೆಯ ಫಲಿತಾಂಶ ಪ್ರಕಟವಾಗಿದೆ. ಜನರ ಆದೇಶವನ್ನು ನಾವು ವಿನಮ್ರತೆಯಿಂದ ತಲೆಬಾಗಿ ಸ್ವೀಕರಿಸುತ್ತೇವೆ. ಜನಾದೇಶಕ್ಕಾಗಿ ಮತ್ತು ಈ ಗೆಲುವಿಗಾಗಿ ಬಿಜೆಪಿಯನ್ನು ಅಭಿನಂದಿಸುತ್ತೇನೆ. ಜನರು ಅನೇಕ ಭರವಸೆಗಳನ್ನು ಇಟ್ಟುಕೊಂಡು ಅವರಿಗೆ ಬಹುಮತ ನೀಡಿದ್ದಾರೆ. ಕಳೆದ ಹತ್ತು ವರ್ಷಗಳಲ್ಲಿ ನಾವು ಶಿಕ್ಷಣ ಆರೋಗ್ಯ ಕುಡಿಯುವ ನೀರು ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ಉತ್ತಮ ಕೆಲಸ ಮಾಡಿದ್ದೇವೆ. ದೆಹಲಿಯ ಸುಧಾರಣೆಗೆ ಅನೇಕ ಕ್ರಮಗಳನ್ನು ಕೈಗೊಂಡಿದ್ದೇವೆ. ಇದೀಗ ಜನ ಆದೇಶ ನೀಡಿದ್ದಾರೆ. ಸಮರ್ಥ ಪ್ರತಿಪಕ್ಷವಾಗಿ ನಾವು ಕಾರ್ಯನಿರ್ವಹಿಸಲಿದ್ದೇವೆ. ಜನರ ಸುಖ ದುಃಖಗಳಿಗೆ ಸ್ಪಂದಿಸಿ ಕೆಲಸ ಮಾಡಬೇಕಾಗಿದೆ. ಚುನಾವಣೆಯಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ ಆಮ್ ಆದ್ಮಿ ಪಕ್ಷದ ಎಲ್ಲಾ ಕಾರ್ಯಕರ್ತರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ" ಎಂದು ಹೇಳಿದ್ದಾರೆ.
Comments