top of page

ಬೆಂಗಳೂರು : ಬೇಸಿಗೆ ಆರಂಭಕ್ಕೂ ಮೊದಲೇ ಶಾಕ್ ; ನೀರು ವ್ಯರ್ಥ ಮಾಡಿದರೆ ಬೀಳುತ್ತೆ ದಂಡ...!!

ಬೆಂಗಳೂರು : ಬೇಸಿಗೆ ಆರಂಭಕ್ಕೂ ಮೊದಲೇ ಶಾಕ್ ; ನೀರು ವ್ಯರ್ಥ ಮಾಡಿದರೆ ಬೀಳುತ್ತೆ ದಂಡ...!!

ree

ಅನಗತ್ಯವಾಗಿ ನೀರು ವ್ಯರ್ಥ ಮಾಡಿದವರಿಗೆ ದಂಡ ವಿಧಿಸಲು ಜಲಮಂಡಳಿ ಸಜ್ಜಾಗಿದ್ದು, ಈ ಬಗ್ಗೆ ಆದೇಶ ಹೊರಡಿಸಿರುವ ಜಲಮಂಡಳಿ ಕೈದೋಟ, ವಾಹನ ತೊಳೆಯಲು ಕುಡಿಯುವ ನೀರು ಬಳಸಿದರೆ 5 ಸಾವಿರ ರೂ. ದಂಡ ವಿಧಿಸುವುದಾಗಿ ತಿಳಿಸಿದೆ. ಆದೇಶ ಉಲ್ಲಂಘಿಸಿದವರ ಬಗ್ಗೆ ಸಹಾಯವಾಣಿ ಸಂಖ್ಯೆ 1916 ಕರೆ ಮಾಡಿ ದೂರು ನೀಡಲು ಸೂಚನೆ ನೀಡಲಾಗಿದೆ.


ಜಲಮಂಡಳಿ ಆದೇಶ

ಬೆಂಗಳೂರು ಮಹಾನಗರದಲ್ಲಿ ಖಾಯಂ ವಾಸಿಗಳು ಹಾಗೂ ಬಂದು ಹೋಗುವವರನ್ನು ಸೇರಿಸಿದಂತೆ ಸುಮಾರು 1 ಕೋಟಿ 40 ಲಕ್ಷ ಜನಸಂಖ್ಯೆಯನ್ನು ಗುರುತಿಸಲಾಗಿದೆ. ಎಲ್ಲರಿಗೂ ಕುಡಿಯುವ ನೀರನ್ನು ಪೂರೈಕೆ ಮಾಡುವುದು ಅವಶ್ಯಕವಾಗಿದೆ. ಪ್ರಸ್ತುತ ನಗರದಲ್ಲಿ ಪ್ರತಿದಿನ ಉಷ್ಣಾಂಶ ಏರುತ್ತಿದೆ. ಇತ್ತೀಚಿನ ದಿನಗಳಲ್ಲಿ ಮಳೆಯ ಕೊರತೆಯಿಂದ ಅಂತರ್ಜಲ ಕುಸಿದಿದ್ದು, ಬೆಂಗಳೂರು ನಗರದಲ್ಲಿ ನೀರನ್ನು ಪೋಲು ಮಾಡುವುದನ್ನು ತಡೆಗಟ್ಟುವುದು ಅವಶ್ಯವೆಂದು ಮನಗಂಡು ಕುಡಿಯುವ ನೀರನ್ನು ಸಾರ್ವಜನಿಕರು ಮಿತವಾಗಿ ಬಳಸುವಂತೆ ಅಗತ್ಯಪಡಿಸಲಾಗಿದೆ. ಈ ಹಿನ್ನಲೆಯಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ಈ ಕೆಳಕಂಡಂತೆ ಆದೇಶ ಹೊರಡಿಸಲಾಗಿದೆ.


ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಕಾಯ್ದೆ-1964ರ ಕಲಂ 33 ಮತ್ತು 34 ರ ಅನುಸಾರ ಬೆಂಗಳೂರು ನಗರದಲ್ಲಿ ಕುಡಿಯುವ ನೀರನ್ನು ಈ ಕೆಳಕಂಡ ಉದ್ದೇಶಗಳಿಗೆ ಬಳಸಲು ಈ ಮೂಲಕ ನೀಷೇದಿಸಲಾಗಿದೆ.

  • ವಾಹನಗಳ ಸ್ವಚ್ಚತೆಗೆ

  • ಕೈದೋಟಕ್ಕೆ

  • ಕಟ್ಟಡ ನಿರ್ಮಾಣಕ್ಕೆ

  • ಮನೋರಂಜಕವಾಗಿ ಕಾರಂಜಿಯಂತಹ ಆಕರ್ಷಕ ವ್ಯವಸ್ಥೆಗೆ

  • ಸಿನಿಮಾ ಮಂದಿರ ಮತ್ತು ಮಾಲುಗಳಲ್ಲಿನ ಕುಡಿಯುವ ನೀರಿನ ಹೊರತು ಇನ್ನಿತರೆ ಬಳಕೆಗೆ

  • ರಸ್ತೆ ನಿರ್ಮಾಣ ಮತ್ತು ಸ್ವಚ್ಛತೆಗೆ

ಮೇಲ್ಕಂಡ ಆದೇಶವನ್ನು ಉಲ್ಲಂಘನೆ ಮಾಡಿದಲ್ಲಿ, ಉಲ್ಲಂಘನೆ ಮಾಡುವವರ ವಿರುದ್ದ ಜಲಮಂಡಳಿಯ ಕಾಯ್ದೆ 1964 ರ ಕಲಂ 109 ರಂತೆ ರೂ. 5000 ದಂಡ ವಿಧಿಸಲಾಗುವುದು. ಈ ಉಲ್ಲಂಘನೆಯು ಮರುಕಳಿಸಿದಲ್ಲಿ ದಂಡ ಮೊತ್ತ ರೂ.5000 ಜೊತೆಗೆ ಹೆಚ್ಚುವರಿಯಾಗಿ ರೂ.500 ಪ್ರತಿದಿನದಂತೆ ದಂಡ ವಿಧಿಸಲಾಗುವುದು.

ree

Comments


Top Stories

Stay updated with the latest news and stories from Karnataka. Subscribe to our newsletter for weekly updates.

© 2024 by NANU PATRAKARTHA. All rights reserved.

bottom of page