ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಿಜೆಪಿ ನಾಯಕಿ ರೇಖಾ ಗುಪ್ತಾ ; ಗೌಪ್ಯತಾ ವಿಧಿ ಬೋಧಿಸಿದ ದೆಹಲಿಯ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ
- ಸಂಪಾದಕೀಯ
- Feb 20
- 1 min read
ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಿಜೆಪಿ ನಾಯಕಿ ರೇಖಾ ಗುಪ್ತಾ ; ಗೌಪ್ಯತಾ ವಿಧಿ ಬೋಧಿಸಿದ ದೆಹಲಿಯ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ

ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕಿ ರೇಖಾ ಗುಪ್ತಾ ಪ್ರಮಾಣವಚನ ಸ್ವೀಕರಿಸಿದ್ದಾರೆ. ಇಲ್ಲಿನ ಐತಿಹಾಸಿಕ ರಾಮಲೀಲಾ ಮೈದಾನದಲ್ಲಿ ನಡೆದ ಭವ್ಯ ಸಮಾರಂಭದಲ್ಲಿ, ದೆಹಲಿಯ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರು, ರೇಖಾ ಗುಪ್ತಾ ಅವರಿಗೆ ಗೌಪ್ಯತಾ ವಿಧಿ ಬೋಧಿಸಿದರು.
ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ ರೇಖಾ ಗುಪ್ತಾ, ದೆಹಲಿ ಜನತೆಯ ಸೇವೆಯ ವಾಗ್ದಾನ ಮಾಡಿದರು. ರೇಖಾ ಗುಪ್ತಾ ಅವರು ದೆಹಲಿಯ 4ನೇ ಮತ್ತು ಬಿಜೆಪಿಯ 2ನೇ ಮುಖ್ಯಮಂತ್ರಿಯಾಗಿದ್ದಾರೆ.
ದೆಹಲಿಯ ಲೆಫ್ಟೆನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರು, ಉಪಮುಖ್ಯಮಂತ್ರಿ ಪರ್ವೇಶ್ ವರ್ಮಾ ಅವರಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ಪರ್ವೇಶ್ ವರ್ಮಾ ಅವರು ದೇವರ ಹೆಸರಿನಲ್ಲಿ ಗೌಪ್ಯತಾ ವಿಧಿ ಸ್ವೀಕರಿಸಿದರು.
ರೇಖಾ ಗುಪ್ತಾ ಮತ್ತು ಪರ್ವೇಶ್ ವರ್ಮಾ ಅವರೊಂದಿಗೆ ಆಶಿಶ್ ಸೂದ್, ಮಂಜಿಂದರ್ ಸಿಂಗ್ ಸಿರ್ಸಾ, ರವೀಂದರ್ ಇಂದ್ರರಾಜ್, ಕಪಿಲ್ ಮಿಶ್ರಾ ಮತ್ತು ಪಂಕಜ್ ಕುಮಾರ್ ಸಿಂಗ್ ಅವರು ದೆಹಲಿ ಸರ್ಕಾರದ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ಎಲ್ಲಾ ಸಚಿವರಿಗೆ ಲೆ.ಗ. ವಿಕೆ ಸಕ್ಸೇನಾ ಪ್ರತಿಜ್ಞಾವಿಧಿ ಬೋಧಿಸಿದರು.
ದೆಹಲಿ ಮುಖ್ಯಮಂತ್ರಿ ಪ್ರಮಾಣವಚನ ಸಮಾರಂಭಕ್ಕೆ, ಪ್ರಧಾನಮಂತ್ರಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಸೇರಿದಂತೆ ಹಲವು ಪ್ರಮುಖ ರಾಜಕೀಯ ನೇತಾರರು ಮತ್ತು ವಿವಿಧ ಕ್ಷೇತ್ರಗಳ ಗಣ್ಯರು ಭಾಗವಹಿಸಿದ್ದರು.

Comments