ದೆಹಲಿ ವಿಧಾನಸಭಾ ಚುನಾವಣೆ : ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಅತಿಶಿ ಮರ್ಲೆನಾ
- ಸಂಪಾದಕೀಯ

- Feb 9
- 1 min read
Updated: Feb 10
ದೆಹಲಿ ವಿಧಾನಸಭಾ ಚುನಾವಣೆ : ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಅತಿಶಿ ಮರ್ಲೆನಾ

ದೆಹಲಿ ಮುಖ್ಯಮಂತ್ರಿ ಸ್ಥಾನಕ್ಕೆ ಅತಿಶಿ ಮರ್ಲೆನಾ ನಿನ್ನೆ(ಫೆ.09) ರಾಜೀನಾಮೆ ನೀಡಿದ್ದಾರೆ. ಲೆಫ್ಟಿನೆಂಟ್ ಗವರ್ನರ್ಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಶನಿವಾರ ಬಂದ ಚುನಾವಣಾ ಫಲಿತಾಂಶದಲ್ಲಿ ಬಿಜೆಪಿ 48 ಸ್ಥಾನಗಳನ್ನು ಮತ್ತು ಆಮ್ ಆದ್ಮಿ ಪಕ್ಷ 22 ಸ್ಥಾನಗಳನ್ನು ಪಡೆದಿದೆ. ಬಿಜೆಪಿ ಇನ್ನೂ ಮುಖ್ಯಮಂತ್ರಿಯ ಹೆಸರನ್ನು ಘೋಷಿಸಿಲ್ಲ.
ದೆಹಲಿ ವಿಧಾನಸಭಾ ಚುನಾವಣೆಯ ಫಲಿತಾಂಶದಲ್ಲಿ ಆಮ್ ಆದ್ಮಿ ಪಕ್ಷದ ಪ್ರಮುಖ ನಾಯಕಿ ಅತಿಶಿ ಕಲ್ಕಾಜಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ರಮೇಶ್ ಬಿಧುರಿ ಅವರನ್ನು 3500 ಕ್ಕೂ ಹೆಚ್ಚು ಮತಗಳಿಂದ ಸೋಲಿಸಿ ಗೆಲುವು ಸಾಧಿಸಿದ್ದಾರೆ.
ಅರವಿಂದ್ ಕೇಜ್ರಿವಾಲ್ ನವದೆಹಲಿ ಕ್ಷೇತ್ರದಿಂದ ಸೋತಿದ್ದಾರೆ. ಜಂಗ್ಪುರ ಕ್ಷೇತ್ರದಿಂದ ಮನೀಶ್ ಸಿಸೋಡಿಯಾ ಕೂಡ ಸೋಲನ್ನು ಅನುಭವಿಸಿದ್ದಾರೆ. ಸೌರಭ್ ಭಾರದ್ವಾಜ್ ಕೂಡ ಗ್ರೇಟರ್ ಕೈಲಾಶ್ ನಿಂದ ಸೋಲನ್ನು ಅನುಭವಿಸಿದ್ದಾರೆ.














Comments