ಬೆಂಗಳೂರು : ಪ್ರತಿಷ್ಠಿತ ಕಂಪನಿಗಳ ಹೆಸರಿನಲ್ಲಿ ನಕಲಿ ಉತ್ಪನ್ನಗಳನ್ನು ತಯಾರಿಸಿ ಮಾರಾಟ...!
- ಸಂಪಾದಕೀಯ
- Feb 6
- 1 min read
ಬೆಂಗಳೂರು : ಪ್ರತಿಷ್ಠಿತ ಕಂಪನಿಗಳ ಹೆಸರಿನಲ್ಲಿ ನಕಲಿ ಉತ್ಪನ್ನಗಳನ್ನು ತಯಾರಿಸಿ ಮಾರಾಟ...!

ಬೆಂಗಳೂರು : ಕಾಟನ್ ಪೇಟೆಯಲ್ಲಿ ನಕಲಿ ಸರ್ಫ್ ಎಕ್ಸೆಲ್, ರಿನ್, ವ್ಹೀಲ್, ಏರಿಯಲ್, ಟೈಡ್, ಗುಡ್ ನೈಟ್ ಮತ್ತು ಆಲ್ ಔಟ್ ಸೇರಿ ಪ್ರತಿಷ್ಠಿತ ಕಂಪನಿಗಳ ಉತ್ಪನ್ನಗಳನ್ನ ಇಟ್ಟು ಮಾರಾಟ ಮಾಡುತ್ತಿದ್ದ ಘಟನೆ ಬೆಳಕಿಗೆ ಬಂದಿದೆ. ಈ ದೂರು ಆಧರಿಸಿ ಸಿಸಿಬಿ ಅಧಿಕಾರಿಗಳು ಗೋಡೌನ್ ಮತ್ತು ಮಾದನಾಯಕನಹಳ್ಳಿ ಠಾಣವ್ಯಾಪ್ತಿಯ ಕಾಚೋಹಳ್ಳಿಯ ಕಾರ್ಖಾನೆ ಮೇಲೆ ದಾಳಿ ಮಾಡಿ ಕೋಟ್ಯಂತರ ರೂಪಾಯಿ ಬೆಲೆಬಾಳುವ ನಕಲಿ ಉತ್ಪನ್ನಗಳನ್ನು ಸೀಜ್ ಮಾಡಿದ್ದಾರೆ. ವಶಪಡಿಸಿಕೊಂಡ ನಕಲಿ ಉತ್ಪನ್ನಗಳ ಅಂದಾಜು ಮೌಲ್ಯ 1.75 ಕೋಟಿ ರೂ. ಎನ್ನಲಾಗಿದೆ.
ಈ ನಕಲಿ ವಸ್ತುಗಳನ್ನು ಸಣ್ಣ ಪುಟ್ಟ ಅಂಗಡಿಗಳಿಗೆ ಅರ್ಧ ಬೆಲೆಗೆ ಸರಬರಾಜು ಮಾಡಲಾಗಿತ್ತಿತ್ತು ಎಂದೂ ಹೇಳಲಾಗುತ್ತಿದೆ. ಇದರಿಂದ ಬ್ರಾಂಡೆಡ್ ಕಂಪನಿಗಳ ವಹಿವಾಟಿಗೆ ಹೊಡೆತವಾಗುವುದರ ಜತೆಗೆ ಜನರ ಜೇಬಿಗೆ ನೇರವಾಗಿ ಕತ್ತರಿ ಬೀಳುತ್ತಿತ್ತು.
ಸದ್ಯ ನಕಲಿ ಉತ್ಪನ್ನಗಳ ದಂಧೆ ನಡೆಸುತ್ತಿದ್ದ ಪ್ರಮುಖ ಆರೋಪಿ ದಳಪತ್ ಸಿಂಗ್ನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಈ ನಕಲಿ ದಂಧೆಯ ಜಾಲ ದೊಡ್ಡದಾಗಿದ್ದು ಸಿಸಿಬಿ ಪೊಲೀಸರು ಮತ್ತಷ್ಟು ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.
Comments