ಕರ್ನಾಟಕ ಬಜೆಟ್ಗೆ ಮುಹೂರ್ತ ಫಿಕ್ಸ್..!!
- ಸಂಪಾದಕೀಯ

- Feb 17
- 1 min read
ಕರ್ನಾಟಕ ಬಜೆಟ್ಗೆ ಮುಹೂರ್ತ ಫಿಕ್ಸ್..!!

"ಮಾರ್ಚ್ 3 ರಿಂದ ವಿಧಾನಮಂಡಲ ಅಧಿವೇಶನ ಪ್ರಾರಂಭವಾಗುತ್ತದೆ. ಮಾರ್ಚ್ 7ರಂದು ಬಜೆಟ್ ಮಂಡಿಸುತ್ತೇನೆ. ಬಳಿಕ 3 ದಿನ ರಾಜ್ಯಪಾಲರ ಭಾಷಣದ ಮೇಲೆ ಚರ್ಚೆಯಾಗುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬಜೆಟ್ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿವಿಧ ಇಲಾಖೆಗಳೊಂದಿಗೆ ಈಗಾಗಲೆ ಪೂರ್ವಭಾವಿ ಸಭೆ ನಡೆಸಿದ್ದಾರೆ. ಇಲಾಖೆಗಳಿಂದ ಮಾಹಿತಿಯನ್ನು ಪಡೆದುಕೊಂಡಿದ್ದಾರೆ.
ಸಿದ್ದರಾಮಯ್ಯ ಅವರು ಸೋಮವಾರ(ಫೆ.17) ಕೂಡ ಸಭೆಗಳನ್ನು ನಡೆಸಿದರು. ಇಂದು ರೈತರು ಮತ್ತು ರೈತ ಸಂಘ-ಸಂಸ್ಥೆಗಳ ಜೊತೆ ಸಭೆ ನಡೆಸಿದ ಅವರು “ಮುಖ್ಯಮಂತ್ರಿ ಸಿದ್ದರಾಮಯ್ಯ ಆದ ನಾನು ಸದಾ ರೈತ ಕುಲದ ಪರವಾಗಿ ಇರುತ್ತೇನೆ. ರೈತರ ಬೇಡಿಕೆಗಳನ್ನು ನಿರಂತರವಾಗಿ ಹಂತ ಹಂತವಾಗಿ ಈಡೇರಿಸುತ್ತಲೇ ಇದ್ದೇವೆ. ಅತಿ ಹೆಚ್ಚು ಉದ್ಯೋಗ ಅವಲಂಬನೆ ಇರುವುದು ಕೃಷಿಯಲ್ಲೇ. ಆದ್ದರಿಂದ ರೈತರ ಬೇಡಿಕೆಗಳಿಗೆ ನಮ್ಮದು ಪ್ರಥಮ ಆದ್ಯತೆ” ಎಂದು ಭರವಸೆ ನೀಡಿದರು.
ಸಭೆ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು "ಇವತ್ತು ಕೂಡ ಸಭೆ ಮಾಡಿದ್ದೀನಿ. ಕರ್ನಾಟಕ ಸರ್ಕಾರ ಯಾವಾಗಲೂ ರೈತರ ಹಿತ ಕಾಪಾಡಲು ಹಿಂದೆ ಬಿದ್ದಿಲ್ಲ. ಯಾವತ್ತೂ ಕೂಡ ರೈತರ ಜೊತೆ ಇರುತ್ತೇವೆ. ಕೃಷಿಕರ ಜೊತೆ ಇರುತ್ತೇವೆ ಎಂಬ ಮಾತು ಕೊಡುತ್ತೇನೆ. ಬೆಲೆ ಏರಿಕೆ ರಾಜ್ಯ ಮತ್ತು ಕೇಂದ್ರ ಸರ್ಕಾರದ ನಿರ್ಧಾರ. ರಾಜ್ಯ ಸರ್ಕಾರದಿಂದ ಬೆಲೆ ಏರಿಕೆಗೆ ಏನೆಲ್ಲಾ ಮಾಡಬೇಕು ಅದನ್ನ ಮಾಡುತ್ತೇವೆ" ಎಂದು ಹೇಳಿದರು.















Comments