ಕರ್ನಾಟಕ ಬಜೆಟ್ 2025-26 : ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕರ ಸಹಾಯ ಧನ ಹೆಚ್ಚಳ
- ಸಂಪಾದಕೀಯ
- Mar 7
- 1 min read
ಕರ್ನಾಟಕ ಬಜೆಟ್ 2025-26 : ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕರ ಸಹಾಯ ಧನ ಹೆಚ್ಚಳ

ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಮಾಸಿಕ ಗೌರವ ಧನವನ್ನು ಹೆಚ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಇಂದು 2025-26ನೇ ಸಾಲಿನ ಕರ್ನಾಟಕ ಬಜೆಟ್ ಮಂಡಿಸಿದ ಸಿಎಂ ಸಿದ್ದರಾಮಯ್ಯ ಅಂಗನವಾಡಿ ಕಾರ್ಯಕರ್ತೆಯರ ಮಾಸಿಕ ಗೌರವಧನ 1 ಸಾವಿರ ರೂ. ಹಾಗೂ ಸಹಾಯಕಿಯರ ಮಾಸಿಕ ಗೌರವಧನ 750 ರೂ,ಗೆ ಹೆಚ್ಚಿಸಲಾಗುವುದು ಎಂದು ಹೇಳಿದರು.
ಅಂಗನವಾಡಿ ಕೇಂದ್ರಗಳಿಗೆ ಹೆಚ್ಚುವರಿ ಸೌಲಭ್ಯಗಳನ್ನು ಒದಗಿಸಲು 175 ಕೋಟಿ ರೂ. ಹಂಚಿಕೆ ಮಾಡಲಾಗುವುದು. ಮಹಿಳಾ ಕೇಂದ್ರಿತ ಕಾರ್ಯಕ್ರಮಗಳಿಗೆ 94,094 ಕೋಟಿ ರೂ. ಹಂಚಿಕೆ ಮಾಡಲಾಗುವುದು, ಮಕ್ಕಳ ಕೇಂದ್ರಿತ ಕಾರ್ಯಕ್ರಮಗಳಿಗೆ 62,033 ಕೋಟಿ ರೂ, ಒದಗಿಸಲಾಗಿದೆ. ಕರ್ನಾಟಕದಲ್ಲಿ ತಡೆಗಟ್ಟಬಹುದಾದ ತಾಯಂದಿರ ಮರಣವನ್ನು ಕಡಿಮೆ ಮಾಡಲು ಮಿಷನ್-ಮೋಡ್ ಕಾರ್ಯಕ್ರಮಕ್ಕಾಗಿ 320 ಕೋಟಿ ರೂ. ಹಂಚಿಕೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

Comments