ಕರ್ನಾಟಕ ಬಜೆಟ್ 2025-26 : ಅತಿಥಿ ಶಿಕ್ಷಕರು, ಅತಿಥಿ ಉಪನ್ಯಾಸಕರ ಮಾಸಿಕ ಗೌರವ ಧನ ಹೆಚ್ಚಳ
- ಸಂಪಾದಕೀಯ
- Mar 7
- 1 min read
ಕರ್ನಾಟಕ ಬಜೆಟ್ 2025-26 : ಅತಿಥಿ ಶಿಕ್ಷಕರು, ಅತಿಥಿ ಉಪನ್ಯಾಸಕರ ಮಾಸಿಕ ಗೌರವ ಧನ ಹೆಚ್ಚಳ

ಇಂದು 2025-26ನೇ ಸಾಲಿನ ಕರ್ನಾಟಕ ಬಜೆಟ್ ಮಂಡಿಸಿದ ಸಿಎಂ ಸಿದ್ದರಾಮಯ್ಯ ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರಿಗೆ ಪ್ರಸ್ತುತ ನೀಡಲಾಗುತ್ತಿರುವ ಮಾಸಿಕ ಗೌರವಧನವನ್ನು ತಲಾ 2,000 ರೂ. ಹೆಚ್ಚಿಸಲಾಗುವುದು. ಜತೆಗೆ, ಸರ್ಕಾರಿ ಶಾಲೆಗಳಲ್ಲಿ ಬಿಸಿಯೂಟ ತಯಾರಿಸುವ ಸಿಬ್ಬಂದಿಗೆ ನೀಡುತ್ತಿರುವ ಮಾಸಿಕ ಗೌರವಧನವನ್ನು ತಲಾ 1,000 ರೂ. ಹೆಚ್ಚಿಸಲಾಗುವುದು ಎಂದು ತಿಳಿಸಿದರು.
ರಾಜ್ಯದ ಅರ್ಹ 100 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳನ್ನು ಪ್ರೌಢ ಶಾಲೆಗಳನ್ನಾಗಿ ಹಾಗೂ 50 ಪ್ರೌಢಶಾಲೆಗಳನ್ನು ಪದವಿ ಪೂರ್ವ ಕಾಲೇಜುಗಳನ್ನಾಗಿ ಉನ್ನತೀಕರಿಸಲಾಗುವುದು ಎಂದು ಬಜೆಟ್ನಲ್ಲಿ ಘೋಷಣೆ ಮಾಡಲಾಗಿದೆ.

Comments