"ಬಸ್ನಲ್ಲಿ ಪುರುಷ ಪ್ರಯಾಣಿಕರಿಗೆ ಸೀಟು ಬಿಟ್ಟುಕೊಡಿ" : ಕೆ.ಎಸ್.ಆರ್.ಟಿ.ಸಿ ಮೈಸೂರು ವಿಭಾಗದಿಂದ ಆದೇಶ...!!
- ಸಂಪಾದಕೀಯ
- Feb 21
- 1 min read
"ಬಸ್ನಲ್ಲಿ ಪುರುಷ ಪ್ರಯಾಣಿಕರಿಗೆ ಸೀಟು ಬಿಟ್ಟುಕೊಡಿ" : ಕೆ.ಎಸ್.ಆರ್.ಟಿ.ಸಿ ಮೈಸೂರು ವಿಭಾಗದಿಂದ ಆದೇಶ...!!

‘‘ಬಸ್ಸಿನಲ್ಲಿ ಮಹಿಳಾ ಪ್ರಯಾಣಿಕರಿಗೆ ಮೀಸಲಿಟ್ಟಿರುವ ಸೀಟುಗಳನ್ನು ಅವರಿಗೇ ಬಿಟ್ಟುಕೊಡಿ. ಮಹಿಳೆಯರಿಗೆ ಮೀಸಲಾತಿರುವ ಆಸನದಲ್ಲಿ ಕುಳಿತು ಪ್ರಯಾಣಿಸಿದರೆ ದಂಡ ವಿಧಿಸಲಾಗುವುದು’’, ಇತ್ಯಾದಿ ಸಂದೇಶಗಳನ್ನು ಹಿಂದೆ ನಾವು ಬಸ್ಸುಗಳಲ್ಲಿ ಓದಿರುತ್ತೇವೆ. ಆದರೆ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ, ಮಹಿಳೆಯರಿಗೆ ಉಚಿತ ಪ್ರಯಾಣದ ಅವಕಾಶ ಕಲ್ಪಿಸುವ ಶಕ್ತಿ ಯೋಜನೆ ಜಾರಿಗೆ ಬಂದ ಮೇಲೆ ಪರಿಸ್ಥಿತಿ ಬದಲಾಗಿದೆ. ಇದೀಗ ಪುರುಷರಿಗೆ ಸೀಟು ಬಿಟ್ಟುಕೊಡಿ ಎಂದು ಹೇಳುವ ಪರಿಸ್ಥಿತಿ ಸೃಷ್ಟಿಯಾಗಿದೆ. ಅಷ್ಟೇ ಏಕೆ, ಈ ವಿಚಾರವಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಮೈಸೂರು ವಿಭಾಗ ಅಧಿಕೃತ ಆದೇಶವನ್ನೂ ಹೊರಡಿಸಿದೆ...!!
ಕೆ.ಎಸ್.ಆರ್.ಟಿ.ಸಿ ಆದೇಶದಲ್ಲಿ ಏನಿದೆ...!?
"ಪುರುಷರಿಗೆ ಮೀಸಲಿರುವ ಆಸನಗಳಲ್ಲಿ ಮಹಿಳೆಯರು ಕುಳಿತು ಪ್ರಯಾಣಿಸುತ್ತಿರುವ ವಿಷಯಕ್ಕೆ ಸಂಬಂಧಿಸಿದಂತೆ ಈ ಆದೇಶ ಹೊರಡಿಸಲಾಗುತ್ತಿದೆ. ಮೈಸೂರು ನಗರ ಸಾರಿಗೆ ವಾಹನಗಳಲ್ಲಿನ ಮರುಷರಿಗೆ ಮೀಸಲಿರುವ ಆಸನಗಳಲ್ಲಿ ಮಹಿಳಾ ಪ್ರಯಾಣಿಕರು ಕುಳಿತುಕೊಳ್ಳುತ್ತಿದ್ದು, ಪುರುಷ ಪ್ರಯಾಣಿಕರಿಗೆ ಆಸನಗಳು ಸಿಗುವುದಿಲ್ಲವೆಂದು ಶ್ರೀ ವಿಷ್ಣುವರ್ಧನ.ಎಸ್ ಎಂಬವರು ಕೇಂದ್ರ ಕಚೇರಿಗೆ ಉಲ್ಲೇಖದಂತೆ ದೂರು ಸಲ್ಲಿಸಿರುವುದು ಸರಿಯಷ್ಟೆ. ಅದರಂತೆ ತಮ್ಮ ಘಟಕಗಳಿಂದ ಕಾರ್ಯಾಚರಣೆಯಾಗುವ ಎಲ್ಲಾ ವಾಹನಗಳಲ್ಲಿ ಪುರುಷ ಪ್ರಯಾಣಿಕರಿಗೆ ಮೀಸಲಿಸಿರುವ ಆಸನಗಳಲ್ಲಿ ಪುರುಷ ಪ್ರಯಾಣಿಕರು ಕುಳಿತು ಪ್ರಯಾಣ ಮಾಡಲು ಕ್ರಮಕೈಗೊಳ್ಳುವಂತೆ ಎಲ್ಲಾ ಚಾಲನಾ ಸಿಬ್ಬಂದಿಗಳಿಗೆ ಸೂಕ್ತ ತಿಳಿವಳಿಕೆ ನೀಡಲು ಸೂಚಿಸಲಾಗಿದೆ ಹಾಗೂ ತೆಗೆದುಕೊಂಡ ಕ್ರಮದ ಉರಿತು ಅನುಸರಣಾ ವರದಿ ಕಳುಹಿಸಬೇಕು" ಎಂದು ಮೈಸೂರು ವಿಭಾಗೀಯ ನಿಯಂತ್ರಣಾಧಿಕಾರಿ ಆದೇಶದಲ್ಲಿ ಉಲ್ಲೇಖಿಸಿದ್ದಾರೆ.

Comments