ಪ್ರಯಾಗ್ರಾಜ್ : ಮಹಾಕುಂಭ ಮೇಳದಲ್ಲಿ 45 ದಿನದಲ್ಲಿ 66 ಕೋಟಿಗೂ ಹೆಚ್ಚು ಭಕ್ತರಿಂದ ಪುಣ್ಯ ಸ್ನಾನ
- ಸಂಪಾದಕೀಯ
- Feb 27
- 1 min read
ಪ್ರಯಾಗ್ರಾಜ್ : ಮಹಾಕುಂಭ ಮೇಳದಲ್ಲಿ 45 ದಿನದಲ್ಲಿ 66 ಕೋಟಿಗೂ ಹೆಚ್ಚು ಭಕ್ತರಿಂದ ಪುಣ್ಯ ಸ್ನಾನ

ಪ್ರಯಾಗ್ರಾಜ್(ಫೆಬ್ರವರಿ 26) : ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳವು ಮಹಾಶಿವರಾತ್ರಿ ಸ್ನಾನದೊಂದಿಗೆ ಮುಕ್ತಾಯಗೊಂಡಿದೆ. ಮಹಾಕುಂಭದಲ್ಲಿ 5 ಪವಿತ್ರ ಸ್ನಾನಗಳು ನಡೆದವು. ಅವುಗಳಲ್ಲಿ ಮೂರು ಅಮೃತ ಸ್ನಾನಗಳು. ಜನವರಿ 14ರಂದು ಮಕರ ಸಂಕ್ರಾಂತಿ, ಜನವರಿ 29ರಂದು ಮೌನಿ ಅಮಾವಾಸ್ಯೆ ಮತ್ತು ಫೆಬ್ರವರಿ 3ರಂದು ವಸಂತ ಪಂಚಮಿ ಅಮೃತ ಸ್ನಾನಗಳು. ಮಹಾಕುಂಭ ಮೇಳದ ಕೊನೆಯ ದಿನವಾದ ಇಂದು 1.44 ಕೋಟಿ ಜನರು ಪುಣ್ಯಸ್ನಾನ ಮಾಡಿದ್ದಾರೆ. ಈ 45 ದಿನಗಳಲ್ಲಿ ಒಟ್ಟು 66 ಕೋಟಿಗೂ ಹೆಚ್ಚು ಜನ ತ್ರಿವೇಣಿ ಸಂಗಮದಲ್ಲಿ ತೀರ್ಥ ಸ್ನಾನ ಮಾಡಿದ್ದಾರೆ ಎಂದು ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.

Comments