ನವದೆಹಲಿ : ರೈಲು ನಿಲ್ದಾಣದಲ್ಲಿ ಕಾಲ್ತುಳಿತ : 15 ಜನ ಸಾವು
- ಸಂಪಾದಕೀಯ
- Feb 16
- 1 min read
ನವದೆಹಲಿ : ರೈಲು ನಿಲ್ದಾಣದಲ್ಲಿ ಕಾಲ್ತುಳಿತ : 15 ಜನ ಸಾವು

ನವದೆಹಲಿ, ಫೆಬ್ರವರಿ 16 : ನವದೆಹಲಿ ನಿಲ್ದಾಣದಿಂದ ಪ್ರಯಾಗ್ರಾಜ್ ಮಹಾ ಕುಂಭಮೇಳಕ್ಕೆ ರೈಲ್ವೆ ಇಲಾಖೆ ಎರಡು ವಿಶೇಷ ರೈಲು ವ್ಯವಸ್ಥೆ ಮಾಡಿತ್ತು. ಈ ಹಿನ್ನೆಲೆಯಲ್ಲಿ ಪ್ರಯಾಗ್ರಾಜ್ಗೆ ತೆರಳಲು ವಿವಿಧ ರಾಜ್ಯಗಳಿಂದ ಬಂದಿದ್ದ ಬಂದಿದ್ದ ನೂರಾರು ಪ್ರಯಾಣಿಕರು ನವದೆಹಲಿ ರೈಲು ನಿಲ್ದಾಣದೊಳಗೆ ನುಗ್ಗಿದ್ದಾರೆ. ಪ್ಲಾಟ್ಫಾರ್ಮ್ ನಂಬರ್ 14 ಮತ್ತು 15ರಲ್ಲಿ ನಿಂತಿದ್ದ ಪ್ರಯಾಗ್ರಾಜ್ ಹೊರಡುವ ವಿಶೇಷ ರೈಲಿನ ಜನರಲ್ ಬೋಗಿಗೆ ಹತ್ತುವಾಗ ನೂಕುನುಗ್ಗಲು ಸಂಭವಿಸಿ, ಕಾಲ್ತುಳಿತವಾಗಿದೆ. ವಿಚಾರ ತಿಳಿದು ಸ್ಥಳಕ್ಕೆ ಎನ್ಡಿಆರ್ಎಫ್ ಸಿಬ್ಬಂದಿ, ರೈಲ್ವೆ, ದೆಹಲಿ ಪೊಲೀಸ್ ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ದೌಡಾಯಿಸಿ ಪರಿಸ್ಥಿತಿ ನಿಯಂತ್ರಿಸಿದರು.
ಕಾಲ್ತುಳಿತ ಸಂಭವಿಸಿ 15 ಜನ ಪ್ರಯಾಣಿಕರು ಮೃತಪಟ್ಟಿದ್ದು, ರಾತ್ರಿ 10 ಗಂಟೆ ಸುಮಾರಿಗೆ ಕಾಲ್ತುಳಿತ ಸಂಭವಿಸಿದೆ ಎಂದು ಭಾರತೀಯ ರೈಲ್ವೆ ಇಲಾಖೆ ತಿಳಿಸಿದೆ.
11 ಜನರಿಗೆ ಗಾಯಗಳಾಗಿದ್ದು, ಎಲ್ಎನ್ಜೆಪಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆರ್ಪಿಎಫ್ ಸಿಬ್ಬಂದಿ ತಕ್ಷಣ ಧಾವಿಸಿ ರಕ್ಷಣಾ ಕಾರ್ಯದಲ್ಲಿ ನಿರತರಾಗಿದ್ದಾರೆ.

Comments