top of page

ಭಾರತಕ್ಕೂ ಕಾಲಿಟ್ಟ HMPV ವೈರಸ್

ಭಾರತಕ್ಕೂ ಕಾಲಿಟ್ಟ HMPV ವೈರಸ್

ಬೆಂಗಳೂರಿನ ಆಸ್ಪತ್ರೆಯಲ್ಲಿ ಪತ್ತೆಯಾಯ್ತು ಮೊದಲ ಪ್ರಕರಣ

8 ತಿಂಗಳ ಮಗುವಿನಲ್ಲಿ ಪತ್ತೆಯಾದ ಸೋಂಕು

ಬೆಂಗಳೂರು : 8 ತಿಂಗಳ ಮಗುವಿಗೆ ಎಚ್‌.ಎಂ.ಪಿ.ವಿ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಇಲಾಖೆ ತಿಳಿಸಿದ್ದು, ಚೀನಾದಲ್ಲಿ ಪತ್ತೆಯಾಗಿರುವ ಮ್ಯುಟೇಟೆಡ್ ವೈರಸ್‌ ಗೂ ಮಗುವಿನಲ್ಲಿ ಪತ್ತೆಯಾದ ಈ ವೈರಸ್ ಗೂ ಸಂಬಂಧವಿದೆಯೇ ಎಂಬುವುದು ಇನ್ನೂ ಸ್ಪಷ್ಟವಾಗಿಲ್ಲ. ಹಾಗಾಗಿ ಚಿಂತಿಸಬೇಕಾಗಿಲ್ಲ ಎಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ. ಯಾವುದೇ ಟ್ರಾವೆಲ್‌ ಹಿಸ್ಟರಿ ಇಲ್ಲದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಗುವಿನಲ್ಲಿ ಈ ವೈರಸ್ ಪತ್ತೆಯಾಗಿದ್ದು, ಮಗುವಿಗೆ ಜ್ವರ ಬಂದ ಹಿನ್ನೆಲೆಯಲ್ಲಿ ನಗರದ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಈ ವೇಳೆ ರಕ್ತ ಪರೀಕ್ಷೆ ಮಾಡಿಸಿದಾಗ ಎಚ್‌.ಎಂ.ವಿ.ಪಿ ವೈರಸ್ ಇರುವುದು ದೃಢಪಟ್ಟಿದೆ. ಸದ್ಯಕ್ಕೆ ಒಂದು ಪ್ರಕರಣ ಪತ್ತೆಯಾಗಿದ್ದು, ಬೆಂಗಳೂರು ಸೇರಿದಂತೆ ರಾಜ್ಯದ ಉಳಿದ ಕಡೆ ಎಲ್ಲೆಲ್ಲಿ ಈ ರೀತಿಯ ಸೋಂಕು ಪತ್ತೆಯಾಗಿದೆ ಎಂಬುದರ ಮಾಹಿತಿ ಕಲೆ ಹಾಕಲು ಆರೋಗ್ಯ ಇಲಾಖೆ ಮುಂದಾಗಿದ್ದು, “ಚೀನಾದಲ್ಲಿ ಕಂಡು ಬಂದಿರುವ ಹೆಚ್‌.ಎಂ.ಪಿ.ವಿ ಹರಡುವ ಬಗ್ಗೆ ಭಯಪಡುವ ಅಗತ್ಯವಿಲ್ಲ” ಎಂದು ಹೇಳಿದ ಆರೋಗ್ಯ ಸೇವೆಗಳ ಮಹಾನಿರ್ದೇಶನಾಲಯದ ಅಧಿಕಾರಿಯಾದ ಡಾ| ಅತುಲ್ ಗೋಯೆಲ್ ರವರು “HMPV ವೈರಸ್ ಗೆ ಸಧ್ಯಕ್ಕೆ ಯಾವುದೇ ನಿರ್ದಿಷ್ಟ ಆಂಟಿವೈರಲ್ ಚಿಕಿತ್ಸೆ ಇಲ್ಲ. ಆದ್ದರಿಂದ ಅದರ ಹರಡುವಿಕೆಯನ್ನು ನಿಯಂತ್ರಿಸಲು ಸೂಕ್ತ ಮುಂಜಾಗ್ರತೆ ಕ್ರಮ ವಹಿಸುವುದು ಅವಶ್ಯಕವಾಗಿದೆ. ಚೀನಾದಲ್ಲಿ ಹೆಚ್‌.ಎಂ.ಪಿ.ವಿ ವೈರಸ್ ಏಕಾಏಕಿ ಹರಡಿರುವ ಬಗ್ಗೆ ಸುದ್ದಿಗಳಿವೆ. ಇದು ಯಾವುದೇ ಇತರ ಉಸಿರಾಟದ ವೈರಸ್‌ ನಂತೆ ಸಾಮಾನ್ಯ ಶೀತವನ್ನು ಉಂಟುಮಾಡುತ್ತದೆ. ಮತ್ತು ವಯಸ್ಸಾದವರಲ್ಲಿ ಮತ್ತು ಚಿಕ್ಕವರಲ್ಲಿ ಇದು ಜ್ವರಕ್ಕೆ ಕಾರಣವಾಗಬಹುದು” ಎಂದು ಕಳೆದವಾರ ವಿವರಿಸಿದ್ದರು. 

ಸದ್ಯ ಚೀನಾದಲ್ಲಿ ಆತಂಕಕ್ಕೆ ಕಾರಣವಾಗಿದೆ ಎನ್ನಲಾಗಿರುವ ಹ್ಯೂಮನ್ ಮೆಟಾಪ್ನ್ಯೂಮೋ ವೈರಸ್ ಅಥವಾ ಎಚ್.ಎಂ.ಪಿ.ವಿ ಹೊಸದೇನಲ್ಲ. ಇದನ್ನು ಮೊದಲು 2001 ರಲ್ಲಿ ಕಂಡುಹಿಡಿಯಲಾಯಿತು ಎಂದು ಯು.ಎಸ್ ಸೆಂಟರ್ಸ್ ಫಾರ್ ಡಿಸೀಸ್ ಕಂಟ್ರೋಲ್ ಅಂಡ್ ಪ್ರಿವೆನ್ಷನ್ ಹೇಳಿದೆ. ಆದಾಗ್ಯೂ, ಕೆಲವು ಸೆರೋಲಾಜಿಕ್ ಪುರಾವೆಗಳು ವೈರಸ್ 1958 ರಿಂದಲೇ ವ್ಯಾಪಕವಾಗಿ ಹರಡಿತ್ತು ಎಂಬುದನ್ನು ನಿರೂಪಿಸಿರುವುದಾಗಿ ತಜ್ಞರು ಹೇಳಿದ್ದಾರೆ. 

“ಮಗುವಿನಲ್ಲಿ ವೈರಸ್ ಪತ್ತೆಯಾದ ಬಗ್ಗೆ ಕೇಂದ್ರ ಆರೋಗ್ಯ ಇಲಾಖೆಗೆ ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ಕೇಂದ್ರ ಆರೋಗ್ಯ ಇಲಾಖೆ ಅಧಿಕಾರಿಗಳ ಜತೆ ನಿರಂತರ ಸಂಪರ್ಕದಲ್ಲಿದ್ದೇವೆ” ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. 

ಸೂಕ್ತ ಮುನ್ನೆಚ್ಚರಿಕೆ ವಹಿಸಲು ಕೇಂದ್ರ ಆರೋಗ್ಯ ಇಲಾಖೆ ರಾಜ್ಯಕ್ಕೆ ಸೂಚನೆ ನೀಡಿದೆ.

Kommentare

Kommentare konnten nicht geladen werden
Es gab ein technisches Problem. Verbinde dich erneut oder aktualisiere die Seite.

Top Stories

Stay updated with the latest news and stories from Karnataka. Subscribe to our newsletter for weekly updates.

© 2024 by NANU PATRAKARTHA. All rights reserved.

bottom of page