ಇಂದಿನಿಂದ ಸಂಸತ್ ಬಜೆಟ್ ಅಧಿವೇಶನ
- ಸಂಪಾದಕೀಯ
- Jan 31
- 1 min read
ಇಂದಿನಿಂದ ಸಂಸತ್ ಬಜೆಟ್ ಅಧಿವೇಶನ

ನರೇಂದ್ರ ಮೋದಿ 3.0 ಸರ್ಕಾರದ 2ನೇ ಬಜೆಟ್ ಅಧಿವೇಶನ ಶುಕ್ರವಾರದಿಂದ ಆರಂಭವಾಗಲಿದ್ದು, ಬೆಳಿಗ್ಗೆ 11 ಗಂಟೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಜಂಟಿ ಸದನ ಉದ್ದೇಶಿಸಿ ಮಾತನಾಡಲಿದ್ದಾರೆ. ಫೆ.1ರಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೇಂದ್ರ ಬಜೆಟ್ ಮಂಡನೆ ಮಾಡಲಿದ್ದಾರೆ.
ಜಂಟಿ ಅಧಿವೇಶನದ ಮೊದಲ ದಿನವಾದ ಇಂದು ಜಂಟಿ ಸದನ ಉದ್ದೇಶಿಸಿ ರಾಷ್ಟ್ರಪತಿಗಳು ಭಾಷಣ ಮಾಡಿದ್ದಾರೆ. ಬಳಿಕ ಆರ್ಥಿಕ ಸಮೀಕ್ಷಾ ವರದಿ ಮಂಡನೆಯಾಗಲಿದೆ. ಜ.31ರಿಂದ ಏಪ್ರಿಲ್ 4ರವರೆಗೆ 2 ಹಂತಗಳಲ್ಲಿ ಬಜೆಟ್ ಅಧಿವೇಶನ ನಡೆಯಲಿದ್ದು, ಮೊದಲ ಹಂತದ ಬಜೆಟ್ ಫೆ.13ಕ್ಕೆ ಮುಕ್ತಾಯವಾಗಲಿದೆ. 2ನೇ ಹಂತದ ಬಜೆಟ್ ಅಧಿವೇಶನ ಮಾರ್ಚ್ 10ರಿಂದ ಆರಂಭವಾಗಿ ಏಪ್ರಿಲ್ 4ಕ್ಕೆ ಮುಕ್ತಾಯವಾಗಲಿದೆ.
ಕೇಂದ್ರ ಸರ್ಕಾರವು ಬಜೆಟ್ ಅಧಿವೇಶನದಲ್ಲಿ ವಕ್ಫ್ ತಿದ್ದುಪಡಿ ಸೇರಿದಂತೆ ಇತರ ಮೂರು ಹೊಸ ಕಾನೂನುಗಳನ್ನು ತರಲು ಮುಂದಾಗಿದೆ. ವಿಮಾನ ವಸ್ತುಗಳ ಮೇಲಿನ ಹಿತಾಸಕ್ತಿಗಳ ರಕ್ಷಣೆ ಮಸೂದೆ, ತ್ರಿಭುವನ್ ಸಹಕಾರಿ ವಿಶ್ವವಿದ್ಯಾಲಯ ಮಸೂದೆ, ವಲಸೆ ಮತ್ತು ವಿದೇಶಿಯ ಮಸೂದೆ ಜಾರಿಗೆ ಮುಂದಾಗಿದೆ. ಜೊತೆಗೆ ಹಿಂದಿನ ಅಧಿವೇಶನದಿಂದ ಉಭಯ ಸದನಗಳಲ್ಲಿ ಇನ್ನೂ 10 ಮಸೂದೆಗಳು ಬಾಕಿ ಉಳಿದಿದ್ದು, ಅವುಗಳನ್ನೂ ಅಂಗೀಕರಿಸುವ ಉದ್ದೇಶವನ್ನು ಸರ್ಕಾರ ಹೊಂದಿದೆ.
Comentarios