ಪ್ರವೀಣ್ ನೆಟ್ಟಾರು ಹತ್ಯೆ ಕೇಸ್ ; ಪ್ರಮುಖ ಆರೋಪಿಯನ್ನು ಬಂಧಿಸಿದ ಎನ್ಐಎ
- ಸಂಪಾದಕೀಯ
- Jan 22
- 1 min read
ಪ್ರವೀಣ್ ನೆಟ್ಟಾರು ಹತ್ಯೆ ಕೇಸ್ ; ಪ್ರಮುಖ ಆರೋಪಿಯನ್ನು ಬಂಧಿಸಿದ ಎನ್ಐಎ

2022ರ ಜುಲೈನಲ್ಲಿ ಬೆಳ್ಳಾರೆ ಗ್ರಾಮದಲ್ಲಿ ಹತ್ಯೆಗೀಡಾಗಿದ್ದ ಹಿಂದೂ ಸಂಘಟನೆ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಪ್ರಕರಣಕ್ಕೆ ಸಂಬಂಧಿಸಿದಂತೆ ಜ. 21ರಂದು ಮತ್ತೊಂದು ಬಂಧನವಾಗಿದೆ. ಪ್ರಕರಣದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಅತೀಖ್ ಅಹ್ಮದ್ ಎಂಬಾತನನ್ನು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಬಂಧನವಾಗಿರುವವರಲ್ಲಿ ಈತ 21ನೇ ಆರೋಪಿ. ಈತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್ಐ) ಸದಸ್ಯನೆಂದು ಹೇಳಲಾಗಿದೆ.
2022ರ ಜುಲೈನಲ್ಲಿ ಬೆಳ್ಳಾರೆಯಲ್ಲಿ ಪ್ರವೀಣ್ ನೆಟ್ಟಾರು ಅವರ ಹತ್ಯೆ ಮಾಡಲಾಗಿತ್ತು. ಪ್ರಾಥಮಿಕ ತನಿಖೆಯಲ್ಲಿ ಇದು ಪಿಎಫ್ಐ ಸಂಘಟನೆಯ ಸದಸ್ಯರ ಕುಕೃತ್ಯ ಎಂಬುದು ತಿಳಿದುಬಂದಿದ್ದರಿಂದ ಆಗ ರಾಜ್ಯ ಸರ್ಕಾರ ಇದನ್ನು ಎನ್ಐಗೆ ವಹಿಸಿತ್ತು. ಆಗಿನಿಂದಲೂ ತನಿಖೆ ನಡೆಸುತ್ತಿರುವ ಎನ್ಐಎ ಇದುವರೆಗೆ 21 ಮಂದಿಯನ್ನು(ಜ. 21ರ ಅತೀಕ್ ಅಹ್ಮದ್ ಬಂಧನವೂ ಸೇರಿ) ಬಂಧಿಸಲಾಗಿದೆ. ಇನ್ನೂ ಆರು ಆರೋಪಿಗಳು ತಲೆಮರೆಸಿಕೊಂಡಿದ್ದು ಅವರಿಗಾಗಿ ಎನ್ಐಎ ಅಧಿಕಾರಿಗಳು ಬಲೆ ಬೀಸಿದ್ದಾರೆ. ಅವರನ್ನು ಹಿಡಿದುಕೊಟ್ಟವರಿಗೆ ಬಹುಮಾನವನ್ನು ನೀಡುವುದಾಗಿಯೂ ಘೋಷಿಸಲಾಗಿದೆ.
ಪ್ರವೀಣ್ ನೆಟ್ಟಾರು ಕೊಲೆಯಲ್ಲಿ ಈತನ ಪಾತ್ರವೇನು? : ಜನರಲ್ಲಿ ಪಿಎಫ್ಐ ಬಗ್ಗೆ ಭೀತಿಯ ವಾತಾವರಣ ಸೃಷ್ಟಿಸಲು, ಈ ಸಂಘಟನೆಯ ನಾಯಕತ್ವವು ಬೇರುಮಟ್ಟದಲ್ಲಿರುವ ತಮ್ಮ ಕಾರ್ಯಕರ್ತರಿಗೆ ಹಿಂದೂ ಸಂಘಟಕರನ್ನು ಟಾರ್ಗೆಟ್ ಮಾಡಿ ಕೊಲ್ಲುವಂತೆ ಸೂಚಿಸಿತ್ತು ಎಂದು ಕೆಲವು ಮಾಧ್ಯಮಗಳಲ್ಲಿ ವರದಿಯಾಗಿದೆ. ಅದೇ ಮಾರ್ಗದರ್ಶನವನ್ನು ಅನುಸರಿಸಿ, ಈಗ ಬಂಧನವಾಗಿರುವ ಅತೀಖ್, ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಪ್ರಮುಖ ಸಂಚುಕೋರ ಎಂದು ಗುರುತಿಸಲ್ಪಟ್ಟ ಮುಸ್ತಫಾ ಪೈಚಾರ್‌ಗೆ ಆಶ್ರಯ ನೀಡಿ ಸಹಾಯ ಮಾಡಿದ್ದ ಎಂದು ವರದಿಗಳಲ್ಲಿ ಉಲ್ಲೇಖಿಸಲಾಗಿದೆ. ಪ್ರವೀಣ್ ನೆಟ್ಟಾರು ಅವರನ್ನು ಗುರುತಿಸಿ ಅವರನ್ನು ಕೊಲೆ ಮಾಡಲು ಮುಸ್ತಾಫ ಯೋಜಿಸಿದ್ದ. ಆತನಿಗೆ ಆಶ್ರಯ ಕೊಡುವ ಮೂಲಕ ಅತೀಖ್ ಈತನಿಗೆ ಸಹಕರಿಸಿದ್ದ ಎಂದು ವರದಿಗಳಲ್ಲಿ ಉಲ್ಲೇಖಿಸಲಾಗಿದೆ.
Hozzászólások