top of page

RCB ತಂಡಕ್ಕೆ ಹೊಸ ನಾಯಕನ ಆಯ್ಕೆ...!

RCB ತಂಡಕ್ಕೆ ಹೊಸ ನಾಯಕನ ಆಯ್ಕೆ...!

ree

ಇಂಡಿಯನ್ ಪ್ರೀಮಿಯರ್ ಲೀಗ್ (IPL 2025)​ ಸೀಸನ್-18 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ರಜತ್ ಪಾಟಿದಾರ್ ಮುನ್ನಡೆಸಲಿದ್ದಾರೆ. ಈ ಹಿಂದೆ ಆರ್​ಸಿಬಿ ತಂಡದ ನಾಯಕರಾಗಿ ವಿರಾಟ್ ಕೊಹ್ಲಿ ನೇಮಕವಾಗಲಿದ್ದಾರೆ ಎನ್ನಲಾಗಿತ್ತು. ಆದರೀಗ ತಂಡದ ಸಾರಥ್ಯವನ್ನು ಪಾಟಿದಾರ್​ಗೆ ವಹಿಸಲಾಗಿದೆ.

ರಜತ್ ಪಾಟಿದಾರ್ ಸೈಯ್ಯದ್ ಮುಷ್ತಾಕ್ ಅಲಿ ಟೂರ್ನಿಯಲ್ಲಿ ಮಧ್ಯ ಪ್ರದೇಶ್ ತಂಡದ ನಾಯಕರಾಗಿ ಕಾಣಿಸಿಕೊಂಡಿದ್ದರು. ಅಲ್ಲದೆ 2021 ರಿಂದ ಆರ್​ಸಿಬಿ ತಂಡದ ಪ್ಲೇಯಿಂಗ್ ಇಲೆವೆನ್​ನ ಖಾಯಂ ಸದಸ್ಯರಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಹೀಗಾಗಿ 31 ವರ್ಷದ ಪಾಟಿದಾರ್​ಗೆ ಕ್ಯಾಪ್ಟನ್ ಪಟ್ಟ ನೀಡಲಾಗಿದೆ.


ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ : ರಜತ್ ಪಾಟಿದಾರ್ (ನಾಯಕ), ವಿರಾಟ್ ಕೊಹ್ಲಿ, ಯಶ್ ದಯಾಳ್, ಲಿಯಾಮ್ ಲಿವಿಂಗ್​ಸ್ಟೋನ್, ಫಿಲ್ ಸಾಲ್ಟ್, ಜಿತೇಶ್ ಶರ್ಮಾ, ಜೋಶ್ ಹ್ಯಾಝಲ್​ವುಡ್, ರಸಿಖ್ ಸಲಾಂ, ಸುಯೇಶ್ ಶರ್ಮಾ, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಸ್ವಪ್ನಿಲ್ ಸಿಂಗ್, ಟಿಮ್ ಡೇವಿಡ್, ನುವಾನ್ ತುಷಾರ, ರೊಮಾರಿಯೋ ಶೆಫರ್ಡ್, ಜೇಕೊಬ್ ಬೆಥೆಲ್, ಮನೋಜ್ ಭಾಂಡಗೆ, ಸ್ವಸ್ತಿಕ್ ಚಿಕಾರ, ದೇವದತ್​ ಪಡಿಕ್ಕಲ್, ಮೋಹಿತ್ ರಾಠಿ, ಅಭಿನಂದನ್ ಸಿಂಗ್, ಲುಂಗಿ ಎನ್​ಗಿಡಿ.

ree

Comments


Top Stories

Stay updated with the latest news and stories from Karnataka. Subscribe to our newsletter for weekly updates.

© 2024 by NANU PATRAKARTHA. All rights reserved.

bottom of page