"ಜೈ" ತುಳು ಸಿನಿಮಾ ಚಿತ್ರೀಕರಣಕ್ಕಾಗಿ ಮಂಗಳೂರಿಗೆ ಬಂದ ಬಾಲಿವುಡ್ ನಟ ಸುನೀಲ್ ಶೆಟ್ಟಿ
- ಸಂಪಾದಕೀಯ
- Jan 14
- 1 min read
"ಜೈ" ತುಳು ಸಿನಿಮಾ ಚಿತ್ರೀಕರಣಕ್ಕಾಗಿ ಮಂಗಳೂರಿಗೆ ಬಂದ ಬಾಲಿವುಡ್ ನಟ ಸುನೀಲ್ ಶೆಟ್ಟಿ

ಮೊದಲ ಬಾರಿಗೆ ತುಳು ಚಿತ್ರವೊಂದರಲ್ಲಿ ನಟಿಸುತ್ತಿರುವ ಬಾಲಿವುಡ್ ಸ್ಟಾರ್ ನಟ ಸುನೀಲ್ ಶೆಟ್ಟಿ ಅವರು ಮಂಗಳವಾರ(ಜ.14) ಮಂಗಳೂರಿಗೆ ಆಗಮಿಸಿದರು.
ರೂಪೇಶ್ ಶೆಟ್ಟಿ ನಿರ್ದೇಶನದ "ಜೈ" ತುಳು ಚಿತ್ರದ ಚಿತ್ರೀಕರಣಕ್ಕೆ ಮಂಗಳೂರಿಗೆ ಬಂದ ಸುನೀಲ್ ಶೆಟ್ಟಿ ಅವರಿಗೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅದ್ದೂರಿ ಸ್ವಾಗತ ನೀಡಲಾಯಿತು.
ಈ ವೇಳೆ ಮಾತನಾಡಿದ ಸುನೀಲ್ ಶೆಟ್ಟಿ ಅವರು, “ಮೊದಲ ಬಾರಿಗೆ ತುಳು ಚಿತ್ರದಲ್ಲಿ ನಟಿಸಲಿದ್ದೇನೆ. ಒಂದು ಉತ್ತಮ ಚಿತ್ರ ಸಿಕ್ಕಿದರೆ ತುಳುವಿನಲ್ಲಿ ಅಭಿನಯಿಸುತ್ತೇನೆ ಎಂದಿದ್ದೆ. ಇದೀಗ ಕಾಲ ಕೂಡಿ ಬಂದಿದೆ. ರೂಪೇಶ್ ಅವರ ಜೈ ಚಿತ್ರದಲ್ಲಿ ಪಾತ್ರ ವಹಿಸಲಿದ್ದೇನೆ” ಎಂದರು.
“ಸುನೀಲ್ ಶೆಟ್ಟಿ ಅವರನ್ನು ತುಳುವಿಗೆ ಕರೆತರುವುದು ಕನಸಾಗಿತ್ತು. ನನ್ನ ನಿರ್ದೇಶನದಲ್ಲಿ ಮಾತ್ರ ಎಂದಲ್ಲ, ಅವರು ಬಂದರೆ ತುಳು ಚಿತ್ರರಂಗಕ್ಕೆ ಒಂದು ಉತ್ತಮ ಬೂಸ್ಟ್ ಸಿಕ್ಕಂತೆ ಆಗುತ್ತದೆ ಎಂದುಕೊಳ್ಳುತ್ತಿದ್ದೆ. ಈಗ ನನ್ನದೇ ನಿರ್ದೇಶನದ ʼಜೈʼ ಸಿನಿಮಾದಲ್ಲಿ ಅವರು ನಟಿಸುತ್ತಿರುವುದು ಮತ್ತಷ್ಟು ಸಂತಸ ತಂದಿದೆ” ಎಂದು ನಟ, ನಿರ್ದೇಶಕ ರೂಪೇಶ್ ಶೆಟ್ಟಿ ಹೇಳಿದರು.
Comments