ಚಿನ್ನದ ದರದಲ್ಲಿ ಮತ್ತೆ ಭಾರೀ ಏರಿಕೆ...!
- ಸಂಪಾದಕೀಯ
- Feb 6
- 1 min read
ಚಿನ್ನದ ದರದಲ್ಲಿ ಮತ್ತೆ ಭಾರೀ ಏರಿಕೆ...!

ಚಿನ್ನದ ಬೆಲೆಯ ಸತತ ಏರಿಕೆ ಇವತ್ತೂ ಮುಂದುವರಿದಿದೆ. ಇವತ್ತು ಗುರುವಾರ ಚಿನ್ನದ ಬೆಲೆ ಗ್ರಾಮ್ಗೆ 25 ರೂ ಏರಿತ್ತು. ನಿನ್ನೆ ಬುಧವಾರ 100 ರೂನಷ್ಟು ಹೆಚ್ಚಳವಾಗಿತ್ತು. ಮೊನ್ನೆ ಮಂಗಳವಾರವೂ ಭರ್ಜರಿ ಏರಿಕೆ ಕಂಡಿತ್ತು. ಮೂರ್ನಾಲ್ಕು ದಿನಗಳಿಂದ ಚಿನ್ನದ ಬೆಲೆಯಲ್ಲಿ ಗಣನೀಯ ಹೆಚ್ಚಳವಾಗಿದೆ. ವಿದೇಶಗಳ ಪೈಕಿ ಪಶ್ಚಿಮ ಏಷ್ಯನ್ ಮಾರುಕಟ್ಟೆಗಳಲ್ಲಿ ಬೆಲೆ ಏರಿಕೆ ಹೆಚ್ಚಾಗಿದೆ. ಇದಕ್ಕೆ ಹೋಲಿಸಿದರೆ ಬೆಳ್ಳಿ ಬೆಲೆಯಲ್ಲಿ ಗಣನೀಯ ಹೆಚ್ಚಳವಾಗಿಲ್ಲ. ಬೆಂಗಳೂರು, ಮುಂಬೈ ಇತ್ಯಾದಿ ಕಡೆ ಬೆಳ್ಳಿ ಬೆಲೆ 100 ರೂಗಿಂತ ಒಳಗೆಯೇ ಇದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 79,300 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 86,510 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,950 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 79,300 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 9,950 ರುಪಾಯಿಯಲ್ಲಿ ಇದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಫೆಬ್ರವರಿ 6ಕ್ಕೆ)
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 79,300 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 86,510 ರೂ
18 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 64,880 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 995 ರೂ
Comments