ರಿಲೀಸ್ಗೂ ಮೊದಲೇ ಹೊಸ ದಾಖಲೆ ಬರೆದ ಯಶ್ ನಟನೆಯ "ಟಾಕ್ಸಿಕ್" ಸಿನಿಮಾ
- ಸಂಪಾದಕೀಯ
- Feb 25
- 1 min read
ರಿಲೀಸ್ಗೂ ಮೊದಲೇ ಹೊಸ ದಾಖಲೆ ಬರೆದ ಯಶ್ ನಟನೆಯ "ಟಾಕ್ಸಿಕ್" ಸಿನಿಮಾ

ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾದ ಕೆಲಸಗಳು ಭರದಿಂದ ಸಾಗುತ್ತಿವೆ. ಈ ಸಿನಿಮಾ ಈಗ ಶೂಟಿಂಗ್ ಸಂದರ್ಭದಲ್ಲೇ ಹೊಸ ದಾಖಲೆ ಬರೆದಿದೆ.
ನಯನತಾರಾ, ಕಿಯಾರಾ ಅಡ್ವಾಣಿ ಮೊದಲಾದವರು ಚಿತ್ರದಲ್ಲಿ ನಟಿಸುತ್ತಿದ್ದಾರೆ. ಮಲಯಾಳಂನ ಗೀತು ಮೋಹನ್ದಾಸ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಪಕ್ಕಾ ಮಾಸ್ ಶೈಲಿಯಲ್ಲಿ ಮೂಡಿಬರುತ್ತಿರುವ ಈ ಚಿತ್ರ ಇಂಗ್ಲಿಷ್ ಹಾಗೂ ಕನ್ನಡದಲ್ಲಿ ಒಟ್ಟಿಗೆ ಶೂಟ್ ಆಗುತ್ತಿದೆ. ಸಾಮಾನ್ಯವಾಗಿ ಸಿನಿಮಾನ ಮೊದಲು ಮೂಲ ಭಾಷೆಯಲ್ಲಿ ಶೂಟ್ ಮಾಡಿ ಉಳಿದ ಭಾಷೆಗೆ ಡಬ್ ಮಾಡಿ ರಿಲೀಸ್ ಮಾಡಲಾಗುತ್ತದೆ. ಕೆಲವೊಮ್ಮೆ ಎರಡು ಭಾಷೆಗಳಲ್ಲಿ ಸಿನಿಮಾಗಳು ಒಟ್ಟಿಗೆ ಶೂಟ್ ಆದ ಉದಾಹರಣೆ ಇದೆ. ಆದರೆ, ಕನ್ನಡ ಹಾಗೂ ಇಂಗ್ಲಿಷ್ನಲ್ಲಿ ಒಟ್ಟಿಗೆ ಸಿನಿಮಾ ಶೂಟ್ ಈವರೆಗೆ ಆಗಿಲ್ಲ ಎಂದು ‘ಟಾಕ್ಸಿಕ್’ ತಂಡ ಹೇಳಿಕೊಂಡ ಬಗ್ಗೆ ವರದಿ ಆಗಿದೆ. ಈ ಮೂಲಕ ಅಪರೂಪದ ದಾಖಲೆಯನ್ನು ತನ್ನದಾಗಿಸಿಕೊಂಡಿದೆ. ಈ ಚಿತ್ರ ಪ್ಯಾನ್ ವರ್ಲ್ಡ್ ಮಟ್ಟದಲ್ಲಿ ರಿಲೀಸ್ ಆಗಲಿದೆ.

Comments