ಮೂರು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಜಿಲ್ಲಾ ಪಂಚಾಯತ್ ಮತ್ತು ತಾಲ್ಲೂಕು ಪಂಚಾಯತ್ ಚುನಾವಣೆಗೆ ಕೊನೆಗೂ ಕೂಡಿಬಂತು ಕಾಲ ; ಮೇ ತಿಂಗಳಲ್ಲಿ ಚುನಾವಣೆ ನಡೆಯುವುದು ಖಾತ್ರಿ...!!
- ಸಂಪಾದಕೀಯ
- Feb 18
- 1 min read
ಮೂರು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಜಿಲ್ಲಾ ಪಂಚಾಯತ್ ಮತ್ತು ತಾಲ್ಲೂಕು ಪಂಚಾಯತ್ ಚುನಾವಣೆಗೆ ಕೊನೆಗೂ ಕೂಡಿಬಂತು ಕಾಲ ; ಮೇ ತಿಂಗಳಲ್ಲಿ ಚುನಾವಣೆ ನಡೆಯುವುದು ಖಾತ್ರಿ...!!

"ಜಿಲ್ಲಾ ಪಂಚಾಯತ್ ಮತ್ತು ತಾಲ್ಲೂಕು ಪಂಚಾಯತ್ ಅಧಿಕಾರಾವಧಿ ಮುಗಿದು ಈಗಾಗಲೇ ಮೂರು ವರ್ಷಗಳಾಗುತ್ತಾ ಬಂದಿದೆ. ಆದರೂ ಇನ್ನೂ ಚುನಾವಣೆ ಆಗುತ್ತಿಲ್ಲ" ಎಂಬ ಟೀಕೆಗಳು ಸಾಮಾಜಿಕ ಹಾಗೂ ರಾಜಕೀಯ ವಲಯಗಳಿಂದ ಕೇಳಿಬಂದಿತ್ತು. ಅದಕ್ಕೀಗ ಕಾಲ ಕೂಡಿಬಂದಿದೆ. ಸರ್ಕಾರದಿಂದ ಮೀಸಲಾತಿ ನಿಗದಿಯಾಗದೇ ಇದ್ದಿದ್ದರಿಂದ ಚುನಾವಣೆಗಳು ನೆನೆಗುದಿಗೆ ಬಿದ್ದಿದ್ದವು. ಆದರೀಗ, ಹೈಕೋರ್ಟ್ ಗೆ ವಿವರಣೆ ನೀಡಿರುವ ರಾಜ್ಯ ಸರ್ಕಾರ, ತಾನು ಮೇ ತಿಂಗಳೊಳಗೆ ಮೀಸಲಾತಿ ಪಟ್ಟಿಯನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸುವುದಾಗಿ ಹೇಳಿದೆ.
ವಿಚಾರಣೆ ವೇಳೆ ಹಾಜರಿದ್ದ ರಾಜ್ಯ ಚುನಾವಣಾ ಆಯೋಗದ ಪ್ರತಿನಿಧಿಗಳು, ಸರ್ಕಾರ ಮೀಸಲಾತಿ ಪಟ್ಟಿಯನ್ನು ನೀಡಿದ ಕೂಡಲೇ ಚುನಾವಣೆಗೆ ತಯಾರಿ ಆರಂಭಿಸಿ ದಿನಾಂಕ ಪ್ರಕಟಿಸುವುದಾಗಿ ಹೇಳಿತು. ಅದರಿಂದಾಗಿ ಮೇ ತಿಂಗಳಲ್ಲಿ ಚುನಾವಣೆ ನಡೆಯುವುದು ಖಾತ್ರಿಯಾಗಿದೆ.

Comments